PM Vishwakarma Yojana 2024:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸುವುದೇನೆಂದರೆ ಪಿಎಂ ವಿಶ್ವಕರ್ಮ ಯೋಜನೆಯ ಅರ್ಜಿ ಪ್ರಾರಂಭವಾಗಿದ್ದು ಆಸಕ್ತಿ ಇರುವಂತಹ ಅರ್ಜಿದಾರರು ಹಾಗೂ ಫಲಾನುಭವಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 1 ಲಕ್ಷ ರೂಪಾಯಿಯಿಂದ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಪಡೆದುಕೊಳ್ಳಬಹುದು ಇದರ ಜೊತೆಗೆ 15,000 ಉಚಿತವಾಗಿ ಹಣ ಪಡೆಯಬಹುದು ಅದು ಹೇಗೆ ಎಂದು ತಿಳಿಯಬೇಕಾದರೆ ಈ ಒಂದು ಲೇಖನಿಯನ್ನು ಕೊನೆವರೆಗೂ ಓದಿ ಅಂದರೆ ಮಾತ್ರ ನಿಮಗೆ ಅರ್ಥ ಆಗುತ್ತೆ
ಈ ಶ್ರಮ ಕಾರ್ಡ್ ಅರ್ಜಿ ಪ್ರಾರಂಭ..! ಅರ್ಜಿ ಸಲ್ಲಿಸಿದವರಿಗೆ ಸಿಗುತ್ತೆ ಪ್ರತಿ ತಿಂಗಳು 3000 ಹಣ ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ನಮ್ಮ ಸರಕಾರದ ಯೋಜನೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ನೇಮಕಾತಿ ಮಾಡಿಕೊಳ್ಳುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ಕರ್ನಾಟಕದಲ್ಲಿ ನಡೆಯುವಂತ ಹಲವಾರು ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರತಿದಿನ ಹೊಸ ಹೊಸ ಸುದ್ದಿಗಳು ಸಿಗುತ್ತವೆ
ಪಿಎಂ ವಿಶ್ವಕರ್ಮ ಯೋಜನೆ (PM Vishwakarma Yojana 2024)..?
ಸ್ನೇಹಿತರೆ ಈ ಪಿಎಂ ವಿಶ್ವಕರ್ಮ ಯೋಜನೆಯನ್ನು ನಮ್ಮ ಕೇಂದ್ರ ಸರ್ಕಾರವು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ನಮ್ಮ ಭಾರತ ದೇಶದಲ್ಲಿ ಇರುವಂತ ಬಡವರಿಗೆ ಹಾಗೂ ವಂಶ ಪಾರಂಪರಿಕ ವೃತ್ತಿ ಮಾಡಿಕೊಂಡು ಬಂದಿರುವಂತೆ ಜನರಿಗೆ ಈ ಯೋಜನೆ ಅಡಿಯಲ್ಲಿ ಮೂರು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಉದ್ದೇಶ ಈ ಯೋಜನೆ ಹೊಂದಿದೆ ಹಾಗೂ ಉಚಿತವಾಗಿ 15 ಸಾವಿರ ರೂಪಾಯಿ ಹಣವನ್ನು ಈ ಒಂದು ಯೋಜನೆಯ ಮೂಲಕ ಪಡೆದುಕೊಳ್ಳಬಹುದು
ಪಿಎಂ ವಿಶ್ವಕರ್ಮ ಯೋಜನೆಯ ಜಾರಿಗೆ ತರಲು ಮುಖ್ಯ ಉದ್ದೇಶವೇನೆಂದರೆ ನಮ್ಮ ದೇಶದಲ್ಲಿ ಇರುವಂತ ವಂಶ ಪಾರಂಪರಿಕ ವೃತ್ತಿ ಮಾಡಿಕೊಂಡು ಬಂದಿರುವಂತಹ ಜನರಿಗೆ ಈ ಯೋಜನೆ ಅಡಿಯಲ್ಲಿ ಕೌಶಲ್ಯ ತರಬೇತಿ ನೀಡುವುದರ ಜೊತೆಗೆ ಹಾಗೂ ಸಾಂಪ್ರದಾಯಿಕ ವೃತ್ತಿಗಳನ್ನು ಕಾಪಾಡುವುದು ಮತ್ತು ಸಣ್ಣ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ಈ ಎಲ್ಲಾ ಕೆಲಸ ಮಾಡಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆಯಿರಿ
ಪಿಎಂ ವಿಶ್ವಕರ್ಮ ಯೋಜನೆಯ ಲಾಭಗಳೇನು (PM Vishwakarma Yojana 2024)..?
ಕೌಶಲ್ಯ ತರಬೇತಿ:- ಪಿಎಂ ವಿಶ್ವಕರ್ಮ ಯೋಜನೆಯ ಪ್ರಮುಖ ಲಾಭವೇನೆಂದರೆ ವಂಶ ಪಾರಂಪರಿಕ ವೃತ್ತಿ ಮಾಡಿಕೊಂಡು ಬಂದಿರುವಂತ ಜನರಿಗೆ ತಮ್ಮ ವೃತ್ತಿಯ ಬಗ್ಗೆ ಕೌಶಲ್ಯ ತರಬೇತಿ ನೀಡುವುದು ಹಾಗೂ ಆಧುನಿಕ ಯಂತ್ರಗಳನ್ನು ಬಳಸಿಕೊಂಡು ಇನ್ನಷ್ಟು ತಮ್ಮ ವೃತ್ತಿಯ ಕೆಲಸವನ್ನು ತುಂಬಾ ಸುಲಭವಾಗಿ ಮಾಡುವುದು ಹಾಗೂ ವಸ್ತುಗಳನ್ನು ಹೆಚ್ಚಿನ ಮಟ್ಟದಲ್ಲಿ ಉತ್ಪಾದಿಸುವುದು ಹಾಗೂ ಮಾರಾಟ ಮಾಡುವುದು ಹೇಗೆ ಇತರ ಅನೇಕ ವಿಷಯಗಳ ಬಗ್ಗೆ ಕೌಶಲ್ಯ ತರಬೇತಿ 5 ರಿಂದ 7 ದಿನಗಳ ಕಾಲ ನೀಡಲಾಗುತ್ತದೆ
3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ:- ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಯ ಪ್ರಮುಖ ಉದ್ದೇಶವೇನೆಂದರೆ ವಂಶ ಪರಂಪರೆಕ ವೃತ್ತಿ ಮಾಡಿಕೊಂಡು ಬಂದಿರುವಂತ ಜನರಿಗೆ ಹಾಗೂ ಸಣ್ಣ ಕೈಗಾರಿಕೆ ಮಾಡಿಕೊಂಡು ಬಂದಿರುವಂತಹ ಜನರಿಗೆ ಹಾಗೂ ಗುಡಿ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಅಂದರೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತದೆ
ಉಚಿತ 15,000 ಹಣ:– ಪಿಎಂ ವಿಶ್ವಕರ್ಮ ಯೋಜನೆಯ ಅರ್ಜಿ ಸಲ್ಲಿಸಿದವರಿಗೆ ಇನ್ನೂ ಒಂದು ಪ್ರಮುಖ ಸುದ್ದಿ ಏನೆಂದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಪ್ರತಿಯೊಬ್ಬ ಫಲಾನುಭವಿಗಳಿಗೆ ಏಳು ದಿನಗಳ ಕಾಲ ಕೌಶಲ್ಯ ತರಬೇತಿ ಮುಗಿದ ನಂತರ ತಮ್ಮ ವೃತ್ತಿಗೆ ಸಂಬಂಧಿಸಿದ ಯಂತ್ರೋಪಕರಣಗಳ ಖರೀದಿಗಾಗಿ 15000 ಹಣವನ್ನು ಉಚಿತವಾಗಿ ನೀಡಲಾಗುತ್ತದೆ ಹಾಗಾಗಿ ಈ ಹಣವನ್ನು ಬಳಸಿಕೊಂಡು ಅರ್ಜಿದಾರರು ಹೊಲಿಗೆ ಯಂತ್ರ ಅಥವಾ ಇತರ ಯಾವುದೇ ವೃತ್ತಿಗೆ ಸಂಬಂಧಿತ ಯಂತ್ರೋಪಕರಣಗಳನ್ನು ಖರೀದಿ ಮಾಡಬಹುದು
ದಿನಗೂಲಿ:- ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಏಳು ದಿನಗಳ ಕಾಲ ಕೌಶಲ್ಯ ತರಬೇತಿಗೆ ಹಾಜರಿದ್ದರೆ ಅಂತ ಸಂದರ್ಭದಲ್ಲಿ ಪ್ರತಿದಿನ 500 ರೂಪಾಯಿ ಈ ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ ಏಳು ದಿನಗಳಿಗೆ 3500 ಹಣವನ್ನು ಈ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (PM Vishwakarma Yojana 2024)..?
- ಪಿಎಂ ವಿಶ್ವಕರ್ಮ ಯೋಜನೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು ಹಾಗೂ ಗರಿಷ್ಠ 59 ವರ್ಷದವರು ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು
- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶವಿದೆ
- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ 15000 ಹಣ ಹಾಗೂ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಭಾರತದ ಪ್ರಜೆಯಾಗಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಒಳಗಡೆ ಇರಬೇಕು
- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಹಿಂದೆ ನಮ್ಮ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಕಡೆಯಿಂದ ಉದ್ಯೋಗ ಮಾಡಲು ಅಥವಾ ಸ್ವಯಂ ಉದ್ಯೋಗಕ್ಕೆ ಸಂಬಂಧಿಸಿದ ಯಾವುದೇ ರೀತಿ ಸಾಲ ಪಡೆದಿರಬಾರದು
- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದಲ್ಲಿ ಸರಕಾರಿ ನೌಕರರು ಇದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ (PM Vishwakarma Yojana 2024)..?
ಸ್ನೇಹಿತರೆ ನೀವು ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಹಾಗೂ 15000 ಹಣವನ್ನು ಉಚಿತವಾಗಿ ಪಡೆದುಕೊಳ್ಳಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ನಮ್ಮ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ತಿಳಿಯಬೇಕೆ ಹಾಗಾದರೆ ನೀವು ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು