Karnataka Lokayukta Recruitment 2024:- ನಮಸ್ಕಾರ ಸ್ನೇಹಿತರೇ ಕರ್ನಾಟಕ ಲೋಕಾಯುಕ್ತದಲ್ಲಿ ಖಾಲಿ ಇರುವ ಟೈಪೇಸ್ಟ್ ಹಾಗೂ ಕ್ಲರ್ಕ್ ಹುದ್ದೆಗಳ ನೇಮಕಾತಿ ಭರ್ತಿ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರೆ ಕರ್ನಾಟಕ ಲೋಕಾಯುಕ್ತ ಇಲಾಖೆ ಗ್ರೂಪ್ ಸಿ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನೆಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಶುಲ್ಕ ಮತ್ತು ಇತರ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭವಾಗಿದೆ ಈ ರೀತಿ ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಖಾಸಗಿ ಕಂಪನಿಯಲ್ಲಿ ಖಾಲಿ ಇರುವ ಉದ್ಯೋಗ ಮತ್ತು ಇತರ ಖಾಲಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಹಾಗೂ ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಕರ್ನಾಟಕ ಲೋಕಾಯುಕ್ತ ಇಲಾಖೆ ನೇಮಕಾತಿ (Karnataka Lokayukta Recruitment 2024)..?
ಸ್ನೇಹಿತರೆ ನಮ್ಮ ಕರ್ನಾಟಕ ಲೋಕಾಯುಕ್ತ ಇಲಾಖೆ ಕಲ್ಯಾಣಿ ಕರ್ನಾಟಕದಲ್ಲಿ ಖಾಲಿ ಇರುವಂತ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರೆ ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ 30 ಗ್ರೂಪ್‌ಸಿ ಹುದ್ದೆಗಳು ಖಾಲಿ ಇವೆ ಮತ್ತು ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು
ಒಂದು ಲೇಖನೆಯ ಮೂಲಕ ಈ ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಮಾನದಂಡಗಳು ಮತ್ತು ಅರ್ಜಿ ಶುಲ್ಕ ಎಷ್ಟು ಹಾಗೂ ಅರ್ಜಿ ಸಲ್ಲಿಸಬೇಕಾಗುವ ಲಿಂಕ್ ಮತ್ತು ಸಂಬಳ ಎಷ್ಟು ಈ ರೀತಿ ಅನೇಕ ಮಾಹಿತಿಗಳನ್ನು ಈಗ ತಿಳಿಯೋಣ ಮತ್ತು ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ವಿವರಿಸಿದ್ದೇವೆ
ಹುದ್ದೆಗಳ ವಿವರ (Karnataka Lokayukta Recruitment 2024)..?
ನೇಮಕಾತಿ ಇಲಾಖೆ:- ಕರ್ನಾಟಕ ಲೋಕಾಯುಕ್ತ ಇಲಾಖೆ
ಒಟ್ಟು ಹುದ್ದೆಗಳ ಸಂಖ್ಯೆ:- 30 ಹುದ್ದೆಗಳು
ಕಲ್ಯಾಣಿ ಕರ್ನಾಟಕ ಭಾಗದವರಿಗೆ:- 14 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಸಂಬಳ:- 34,100/- ರಿಂದ 67,600/- ವರೆಗೆ
ಅರ್ಜಿ ಕೊನೆಯ ದಿನಾಂಕ:- 29/11/2024
ಹುದ್ದೆಗಳ ಹೆಸರು:- ಕ್ಲರ್ಕ್ ಹಾಗೂ ಟೈಪೇಸ್ಟ್ ಹುದ್ದೆಗಳು
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Karnataka Lokayukta Recruitment 2024)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಕರ್ನಾಟಕ ಲೋಕಾಯುಕ್ತ ಇಲಾಖೆ ಅಧಿಸೂಚನೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಈ 30 ಕ್ಲರ್ಕ್ ಹಾಗೂ ಟೈಪೇಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಬೇಕು ಹಾಗೂ ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ವಯೋಮಿತಿ:- ಸ್ನೇಹಿತರೆ ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಖಾಲಿ ಇರುವ 30 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 38 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ.! ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ ಹಾಗೂ ಪ್ರವರ್ಗ 2A,2B,3A,3B ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕ್ಕೆ ಮಾಡಲಾಗಿದೆ
ಅರ್ಜಿ ಶುಲ್ಕ:- ಸ್ನೇಹಿತರ ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಖಾಲಿ ಇರುವ 30 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ವರ್ಗಕ್ಕೆ ಸೇರಿದರೆ ಹಾಗೂ ಪ್ರವರ್ಗ 2A,2B,3A,3B ವರ್ಗದ ಅಭ್ಯರ್ಥಿಗಳಿಗೆ 250 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:– ಸ್ನೇಹಿತರ ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಖಾಲಿ ಇರುವ 30 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೊದಲು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳನ್ನು ಪರಿಗಣಿಸಿ ಮೀಸಲಾತಿ ಆಧಾರದ ಮೇಲೆ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ನಂತರ ಈ ಪಟ್ಟಿಯಲ್ಲಿ ಹೆಸರಿರುವಂತ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಮತ್ತು ಈ ಪರೀಕ್ಷೆಯಲ್ಲಿ ಕನಿಷ್ಠ 50% ರಷ್ಟು ಅಂಕಗಳನ್ನು ಅಭ್ಯರ್ಥಿಗಳು ಪಡೆದುಕೊಳ್ಳಬೇಕು
ಸಂಬಳ:- ಸ್ನೇಹಿತನ ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಖಾಲಿ ಇರುವ 30 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳು ಆಯ್ಕೆಯಾದ ನಂತರ ಪ್ರತಿ ತಿಂಗಳು ಅಥವಾ ಮಾಸಿಕವಾಗಿ ₹34,100/- ರಿಂದ ₹67,600/- ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು:- ಸ್ನೇಹಿತರ ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಖಾಲಿ ಇರುವ 30 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29/11/2024 ನಿಗದಿ ಮಾಡಲಾಗಿದೆ ಮತ್ತು ಅರ್ಜಿ ಶುಲ್ಕ ಪಾವತಿಗೆ 30 ನವೆಂಬರ್ 2024 ಕೊನೆಯ ದಿನಾಂಕವಾಗಿದೆ ಆಸಕ್ತಿ ಇರುವ ಅಭ್ಯರ್ಥಿಗಳು ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸುವುದು ಹೇಗೆ (Karnataka Lokayukta Recruitment 2024)..?
ಸ್ನೇಹಿತರೆ ಈ ಹುದ್ದೆಗಳಿಗೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿತ್ತು ಕರ್ನಾಟಕ ಲೋಕಾಯುಕ್ತ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಅಥವಾ ನಿಮಗೆ ಹತ್ತಿರವಿರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಕಂಪನಿಯ ಹುದ್ದೆಗಳು ಮತ್ತು ಇತರ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಹೊಸ ಹೊಸ ಸುದ್ದಿಗಳು ಹೊಸ ಹೊಸ ಹುದ್ದೆಗಳ ಸಂಬಂಧಿಸಿದಂತೆ ನೇಮಕಾತಿ ಕುರಿತು ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು