ration card apply date 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರವು ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಇಷ್ಟು ದಿನ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದವರಿಗೆ ಇದು ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಈಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಈ ದಾಖಲಾತಿ ಇದ್ದರೆ ಮಾತ್ರ ಅರ್ಜಿ ಸಲ್ಲಿಸಲು ಬರುತ್ತದೆ ಹಾಗಾಗಿ ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ಕಡ್ಡಾಯ ದಾಖಲಾತಿಗಳು ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಗೂ ಗೃಹಲಕ್ಷ್ಮಿ ಯೋಜನೆಯ ಮಾಹಿತಿ ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಹಾಗೂ ವಿವಿಧ ಲೋನ್ ಸೌಲಭ್ಯಗಳ ವಿವರವನ್ನು ಪ್ರತಿದಿನ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೊಸ ರೇಷನ್ ಕಾರ್ಡ್ (ration card apply date 2024)..?
ಸ್ನೇಹಿತರೆ ಇವತ್ತಿನ ದಿನ ಹೊಸ ರೇಷನ್ ಕಾರ್ಡ್ ಅಥವಾ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಸಾಕಷ್ಟು ಜನರು ಅರ್ಜಿ ಹಾಕಲು ಕಾಯುತ್ತಿದ್ದಾರೆ ಏಕೆಂದರೆ ಇವತ್ತು ನಮ್ಮ ಕರ್ನಾಟಕದಲ್ಲಿ bpl ರೇಷನ್ ಕಾರ್ಡ್ ಹೊಂದಿದಂತವರು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಉಚಿತವಾಗಿ ಅಕ್ಕಿ ಹಾಗೂ ಅಕ್ಕಿ ಹಣ ಮತ್ತು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 2000 ಹಾಗೂ ಇವನಿಗೆ ಯೋಜನೆಯ ಮೂಲಕ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3000 ಮತ್ತು ಉಚಿತ ಬಸ್ಸು ಇತರ ಹಲವಾರು ಯೋಜನೆಗಳ ಲಾಭವನ್ನು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರು ಪಡೆಯಬಹುದಾಗಿದೆ
ಆದ್ದರಿಂದ ನಮ್ಮ ಕರ್ನಾಟಕದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಾಗಿದ್ದು ಇದೀಗ ನಮ್ಮ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಹಾಗೂ ಅರ್ಹ ಅಭ್ಯರ್ಥಿಗಳು ಈ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಈ ದಾಖಲಾತಿ ಬೇಕು (ration card apply date 2024)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ನಮ್ಮ ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಿಮ್ಮ ಹತ್ತಿರ ಇ-ಶ್ರಮ್ ಕಾರ್ಡ್ ಇರಬೇಕು ಅಂದರೆ ಮಾತ್ರ ನಿಮಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ ಹಾಗಾಗಿ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇಲ್ಲದೆ ಇದ್ದರೆ ಈ ರೀತಿ ಅರ್ಜಿ ಸಲ್ಲಿಸಿ
ಇ-ಶ್ರಮ್ ಕಾರ್ಡು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಇರುವ ಅರ್ಹತೆಗಳು (ration card apply date 2024)..?
- ಸ್ನೇಹಿತರೆ ನೀವು ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರೆ ನಿಮ್ಮ ಕುಟುಂಬದ ವಾರ್ಷಿಕ ಆದಾಯ 1,20,000 ಗಿಂತ ಮೀರಬಾರದು
- ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಅರ್ಜಿದಾರರ ಕುಟುಂಬದ ಜಮೀನು ಅಥವಾ ಆಸ್ತಿ 5 ಹೆಕ್ಟರ್ ಗಿಂತ ಕಡಿಮೆ ಇರಬೇಕು
- ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಅರ್ಜಿದಾರರು ನಗರ ಪ್ರದೇಶ ಅಥವಾ ಗ್ರಾಮೀಣ ಪ್ರದೇಶದಲ್ಲಿ 100 ಚದರ್ ಅಡಿಗಿಂತ ಕಡಿಮೆ ಪ್ಲಾಟ್ ಹೊಂದಿರಬೇಕು ಹಾಗೂ ಗುಡಿಸಲು ಅಥವಾ ಪತ್ರಸ್ ಮನೆ ಹೊಂದಿರಬೇಕು
- ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಸರಕಾರಿ ನೌಕರಿದಾರರಿಗೆ ಹಾಗೂ ಕುಟುಂಬದಲ್ಲಿ ಉನ್ನತ ಹುದ್ದೆಯಲ್ಲಿ ಇರುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
- ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವ ಕುಟುಂಬದಲ್ಲಿ ವೈಟ್ ಬೋರ್ಡ್ ಕಾರು ಅಥವಾ ಟ್ಯಾಕ್ಟರ್ ಹಾಗೂ ಇತರ ಹೆವಿ ವಾಹನಗಳು ಹೊಂದಿರಬಾರದು
- ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವ ಕುಟುಂಬಗಳು ಆದಾಯ ತೆರಿಗೆ ಅಥವಾ GST ಪಾವತಿಸುವವರು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ
ಅರ್ಜಿ ಸಲ್ಲಿಸಲು ಯಾವಾಗ ಪ್ರಾರಂಭ (ration card apply date 2024)..?
ಸ್ನೇಹಿತರೆ ನೀವು ಅಸಂಘಟಿತ ವಲಯದ ಕೂಲಿ ಕಾರ್ಮಿಕರಾಗಿದ್ದರೆ ಹಾಗೂ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಅರ್ಜಿ ಸಲ್ಲಿಸಲು 03 ನವೆಂಬರ್ 2024 ರಿಂದ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 6:00 ವರೆಗೆ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಅಥವಾ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಮತ್ತು ಕೊನೆಯ ದಿನಾಂಕ ನಿಗದಿ ಮಾಡಿಲ್ಲ ಆದ್ದರಿಂದ ಬೇಗ ಅರ್ಜಿ ಸಲ್ಲಿಸಿ ಏಕೆಂದರೆ ಕೊನೆಯ ದಿನಾಂಕ ನಿಗದಿ ಮಾಡಬಹುದು
ಹೆಚ್ಚಿನ ಮಾಹಿತಿಗಾಗಿ:– ಹೌದು ಸ್ನೇಹಿತರೆ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹಾಗೂ ಇತರೆ ಯಾವುದೇ ಸಂದೇಹ ಇದ್ದರೆ ನೀವು ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ 1967 ಉಚಿತ ದೂರವಾಣಿ ಸಂಖ್ಯೆಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:30ರವರೆಗೆ ಸಂಪರ್ಕಿಸಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ಇತರ ಮಾಹಿತಿಯನ್ನು ಪಡೆಯಬಹುದು ಅಥವಾ ಪೂರ್ತಿ ಉಚಿತ ದೂರವಾಣಿ ಸಂಖ್ಯೆ :- 1800-425-9339 ಗೆ ಕರೆ ಮಾಡಿ ಮಾಹಿತಿ ತಿಳಿದುಕೊಳ್ಳಿ
ಅರ್ಜಿ ಸಲ್ಲಿಸಬೇಕಾಗುವ ದಾಖಲಾತಿಗಳು (ration card apply date 2024)..?
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇ-ಶ್ರಮ ಕಾರ್ಡ್
- ಜನನ ಪ್ರಮಾಣ ಪತ್ರ (6- ವರ್ಷದ ಒಳಗಿನ ಮಕ್ಕಳಿಗೆ)
- ಆಧಾರ್ ಕಾರ್ಡ್
- ಇತ್ತೀಚಿನ ಭಾವಚಿತ್ರ
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (ration card apply date 2024)..?
ಸ್ನೇಹಿತರೆ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ನೀವು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು ಮೊದಲನೆಯದಾಗಿ ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಅಥವಾ ನಿಮಗೆ ಅರ್ಜಿ ಸಲ್ಲಿಸಲು ಆಗದೆ ಇದ್ದಲ್ಲಿ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ಸಾಕಷ್ಟು ಜನರು ಹೊಸ ರೇಷನ್ ಕಾರ್ಡಿಗಾಗಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅಂತವರಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು WhatsApp Messenger Telegram ಗ್ರೂಪಿಗೆ ಜಾಯಿನ್ ಆಗಬಹುದು